36 ನಿಮ್ಮ ತಂದೆ ಕರುಣವುಳ್ಳವನಾಗಿರುವ ಪ್ರಕಾರವೇ ನೀವೂ ಕರುಣವುಳ್ಳವರಾಗಿರಿ. (ಲೂಕನು.6:36)
27 ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ.ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸರಿಮಾಡುವನು.. (ಲೂಕನು.7:27)
25 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ಕೆಡಿಸಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು? .. (ಲೂಕನು.9:25)
27 ಅದಕ್ಕೆ ಅವನು - ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಬುದ್ಧಿಯಿಂದಲೂ ಪ್ರೀತಿಸಬೇಕು. ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂದು ಬರೆದದೆ ಅಂದನು. (ಲೂಕನು.10:27)
31 ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ; ಇದರ ಕೂಡ ಅವೂ ನಿಮಗೆ ದೊರಕುವವು. (ಲೂಕನು.12:31)
11 ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳು.(ಲೂಕನು.14:11)
7 ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದು... (ಲೂಕನು.15:7)
19 ಎದ್ದು ಹೋಗು. ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ ಎಂದು ಹೇಳಿದನು.(ಲೂಕನು.17:19)
42 ಯೇಸು ಅವನಿಗೆ - ನಿನಗೆ ಕಣ್ಣು ಬರಲಿ; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು. 43 ತಕ್ಷಣವೇ ಅವನಿಗೆ ಕಣ್ಣುಬಂದವು; ಅವನು ದೇವರನ್ನು ಕೊಂಡಾಡುತ್ತಾ ಆತನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು. (ಲೂಕನು.18:42-43)
36 ಅವರು ಇನ್ನು ಮರಣಕ್ಕೆ ಗುರಿಯಾಗುವದೇ ಇಲ್ಲ. ಪುನರುತ್ಥಾನವನ್ನು ಹೊಂದಿದವರಾಗಿದ್ದು ದೇವದೂತರಿಗೆ ಸರಿಸಮಾನರೂ ದೇವರ ಮಕ್ಕಳೂ ಆಗಿದ್ದಾರೆ. ಸತ್ತವರು ಬದುಕಿ ಏಳುತ್ತಾರೆ.. (ಲೂಕನು.20:36)
ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. (ಲೂಕನು.20:37)
38 ಆತನಿಗೆ ಎಲ್ಲರೂ ಜೀವಿಸುವವರೇ ಎಂದು ಹೇಳಿದನು. (ಲೂಕನು.20:38)
27 ಆಗ ಮನುಷ್ಯಕುಮಾರನು ಬಲದಿಂದಲೂ ಬಹುಮಹಿಮೆಯಿಂದಲೂ ಮೇಘದಲ್ಲಿ ಬರುವದನ್ನು ಕಾಣುವರು. (ಲೂಕನು.21:27)
33 ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ. (ಲೂಕನು.21:33)
19 ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು. 20 ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. (ಲೂಕನು.22:19-20)
30 ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಲ್ಲುವಿರಿ (ಲೂಕನು.22:30)
43 ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು ಆತನನ್ನು ಬಲಪಡಿಸಿದನು. (ಲೂಕನು.22:43)
69 ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು ಎಂದು ಹೇಳಿದನು. (ಲೂಕನು.22:69)
43 ಅದಕ್ಕೆ ಯೇಸು - ಈಹೊತ್ತೇ ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ ಎಂದು ಉತ್ತರಕೊಟ್ಟನು. (ಲೂಕನು.23:43)
2 ಆ ವಾಕ್ಯವೆಂಬವನು ಆದಿಯಲ್ಲಿ ದೇವರ ಬಳಿಯಲ್ಲಿದ್ದನು. 3 ಆತನ ಮೂಲಕವಾಗಿ ಸಮಸ್ತವು ಉಂಟಾಯಿತು; ಉಂಟಾಗಿರುವ ವಸ್ತುಗಳಲ್ಲಿ ಆತನಿಲ್ಲದೆ ಒಂದಾದರೂ ಉಂಟಾಗಲಿಲ್ಲ. 4 ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು. 5 ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಕತ್ತಲು ಅದನ್ನು ಮುಸುಕಲಿಲ್ಲ. ( ಯೋಹಾನನು.1:2-5)
9 ನಿಜವಾದ ಬೆಳಕು ಲೋಕಕ್ಕೆ ಬರುವದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು. ( ಯೋಹಾನನು.1:9)
12 ಯಾರಾರು ಆತನನ್ನು ಅಂಗೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ, ಅವರಿಗೆ ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು. ( ಯೋಹಾನನು.1:12)
16 ನಾವೆಲ್ಲರು ಆತನ ಪರಿಪೂರ್ಣತೆಯೊಳಗಿಂದ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು. ( ಯೋಹಾನನು.1:16)
Jesus telugu movie song Jesus videos songs, messages. testimonys. this site all copyrights reserved 2020 to 3080 @
www.powermtv.wap.sh
www.chandruj.wap.sh
www.jesustv.wap.sh
www.godtv.wap.sh
www.bibletv.wap.sh...
www.ttcb.wap.sh
www.jesusgod.wap.sh
www.jesusbible.wap.sh
www.powermtv1.wap.sh
www.uecf.net